Live Stream

[ytplayer id=’22727′]

| Latest Version 8.0.1 |

State News

ಬಿಜೆಪಿ ಜಿಲ್ಲಾಧ್ಯಕ್ಷರೊಬ್ಬರಿಗೆ ನಡು ರಸ್ತೆಯಲ್ಲಿಯೇ ಕಪಾಳಕ್ಕೆ ಬಾರಿಸಿದ ಚಿತ್ರದುರ್ಗದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಗಾದಿಲಿಂಗಪ್ಪ

ಬಿಜೆಪಿ ಜಿಲ್ಲಾಧ್ಯಕ್ಷರೊಬ್ಬರಿಗೆ  ನಡು ರಸ್ತೆಯಲ್ಲಿಯೇ ಕಪಾಳಕ್ಕೆ ಬಾರಿಸಿದ ಚಿತ್ರದುರ್ಗದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಗಾದಿಲಿಂಗಪ್ಪಬಿಜೆಪಿ ಜಿಲ್ಲಾಧ್ಯಕ್ಷರೊಬ್ಬರಿಗೆ ನಡು ರಸ್ತೆಯಲ್ಲಿಯೇ ಕಪಾಳಕ್ಕೆ ಬಾರಿಸಿದ ಚಿತ್ರದುರ್ಗದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಗಾದಿಲಿಂಗಪ್ಪ

ಚಿತ್ರದುರ್ಗ: ಬಿಜೆಪಿ ಜಿಲ್ಲಾಧ್ಯಕ್ಷರೊಬ್ಬರಿಗೆ ಚಿತ್ರದುರ್ಗದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನಡು ರಸ್ತೆಯಲ್ಲಿಯೇ ಕಪಾಳಕ್ಕೆ ಬಾರಿಸಿದ ಘಟನೆ ನಡೆಸಿದೆ.  ಆ ಬಳಿಕ ಬಿಜೆಪಿ ಕಾರ್ಯರ್ತರ ಗುಂಪು ಪೊಲೀಸರ ಮೇಲೆ ಹಲ್ಲೆ ಮಾಡಿದೆ ಎಂಬ ಆರೋಪವೂ ಕೇಳಿಬಂದಿದೆ.  ಸದ್ಯ ವಿಡಿಯೋ ವೈರಲ್‌ ಆಗಿದೆ.

 

ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿ ರಾತ್ರಿ ಘಟನೆ ನಡೆದಿದೆ. ಮೊದಲಿಗೆ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ರಸ್ತೆ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದನ್ನು ಪಿಎಸ್ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಬಿಜೆಪಿ ನಾಯಕ ಅವ್ಯಾಚ್ಯ ಪದರ ಬಳಸಿದ ಎಂಬ ಕಾರಣಕ್ಕೆ ಪಿಎಸ್‌ಐ ಕಪಾಳಕ್ಕೆ ಬಾರಿಸಿದ್ದಾರೆ. ಮುಂದುವರೆದು ಇಬ್ಬರು ಕೈಕೈ ಮಿಲಾಯಿಸಿ ಜಗಳವಾಡಿದ್ದಾರೆ. ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿ ರಾತ್ರಿ ಘಟನೆ ನಡೆದಿದೆ. ಮೊದಲಿಗೆ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ರಸ್ತೆ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದನ್ನು ಪಿಎಸ್ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಬಿಜೆಪಿ ನಾಯಕ ಅವ್ಯಾಚ್ಯ ಪದರ ಬಳಸಿದ ಎಂಬ ಕಾರಣಕ್ಕೆ ಪಿಎಸ್‌ಐ ಕಪಾಳಕ್ಕೆ ಬಾರಿಸಿದ್ದಾರೆ. ಮುಂದುವರೆದು ಇಬ್ಬರು ಕೈಕೈ ಮಿಲಾಯಿಸಿ ಜಗಳವಾಡಿದ್ದಾರೆ.

ಇಬ್ಬರೂ ಆಸ್ಪತ್ರೆಗೆ ದಾಖಲು

ಈ ಬಗ್ಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಹನುಮಂತೇಗೌಡರ ಕಾರು ಚಾಲಕ ರಂಗಸ್ವಾಮಿ ಮಾತನಾಡಿ, ಶುಕ್ರವಾರ ರಾತ್ರಿ 11:30ರ ಸುಮಾರಿಗೆ ಖಾಸಗಿ ಹೋಟೆಲ್‌ನಲ್ಲಿ ಊಟ ಮಾಡಿ ಹೊರಡಲು ನಿಂತಿದ್ದೆವು. ಈ ವೇಳೆ ಸ್ಥಳಕ್ಕೆ ಬಂದ ಪಿಎಸ್ಐ ಗಾದಿಲಿಂಗಪ್ಪ ಅವರು “ರಾತ್ರಿ ಇಷ್ಟೊತ್ತಾದರೂ ಏಕೆ ನಿಂತಿದ್ದೀರೋ ಎಂದು ಪ್ರಶ್ನಿಸಿದರು. ಸರ್ ಹೊರಡುತ್ತಿದ್ದೇವೆ ಎಂದರೂ ಏಕವಚನದಲ್ಲೇ ಮಾತನಾಡಿದರು. ನಾನು ಬಿಜೆಪಿ ಜಿಲ್ಲಾದ್ಯಕ್ಷ, ಗೌರವಯುತವಾಗಿ ಮಾತಾಡಿ ಎಂದು ಹನುಮಂತೇಗೌಡ ಹೇಳಿದರು. ಆದರೂ, ಪಿಎಸ್ಐ ಗಾದಿಲಿಂಗಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಆಗ ನೂಕಾಟ ತಳ್ಳಾಟ ನಡೆಯಿತು, ಪಿಎಸ್ಐ ಹಲ್ಲೆ ಮಾಡಿದರು” ಎಂದು ಹೇಳಿದ್ದಾರೆ.

ಪಿಎಸ್ಐ ಗಾದಿಲಿಂಗಪ್ಪ ಅವರ ಕೈ ಬೆರಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಹನುಮಂತೇಗೌಡ ಅವರು ಪೊಲೀಸರಿಂದಲೇ‌ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಪ್ರತಿ ಆರೋಪ ಮಾಡಿದ್ದಾರೆ. ಆ ಬಳಿಕ ಹನುಮಂತೇಗೌಡ ಎದೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, “ಖಂಡನೆ

ಚಿತ್ರದುರ್ಗದಲ್ಲಿ ನಮ್ಮ ಪಕ್ಷದ ಮಧುಗಿರಿ (ಸಂಘಟನಾತ್ಮಕ ಜಿಲ್ಲೆ) ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ ಅವರ ಮೇಲೆ ಪಿಎಸ್ಐ ಗಾದಿಲಿಂಗಪ್ಪ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು ಕರ್ನಾಟಕ ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ. ನಾಗರಿಕ ಸಮಾಜದಲ್ಲಿ ಶಾಂತಿ ಸಂರಕ್ಷಿಸಲಾಗದ ಅಧಿಕಾರಿಗಳು ಮಧ್ಯರಾತ್ರಿಯಲ್ಲಿ ತಮ್ಮ ಪೊಲೀಸ್ ರೌದ್ರಾವತಾರ ಪ್ರದರ್ಶಿಸಲು ಹೊರಟಿದ್ದಾರೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವ ಮುನ್ನ ಅವರ ಸಾಮಾಜಿಕ ಸ್ಥಾನಮಾನವನ್ನೂ ಲೆಕ್ಕಿಸದೆ ಗೂಂಡಾಗಿರಿ ಪ್ರದರ್ಶಿಸುವುದು ಪೋಲಿಸ್ ಇಲಾಖೆಯ ದಕ್ಷತೆಯ ಘನತೆಯನ್ನು ಕಳೆದಂತೆ. ಕಾಂಗ್ರೆಸ್ ಪ್ರಭಾವಿಗಳಿಂದ ಆಯಾ ಕಟ್ಟಿನ ಸ್ಥಾನದಲ್ಲಿ ಕುಳಿತುಕೊಂಡಿರುವ ಕೆಲವು ಪೊಲೀಸ್ ಅಧಿಕಾರಿಗಳು ತಮಗೆ ಯಾರೂ ಏನೂ ಮಾಡಲಾಗದು ಎಂಬ ಮನಸ್ಥಿತಿಯನ್ನು ಮೈಗೂಡಿಸಿಕೊಂಡಿದ್ದು ಎಲ್ಲೆಂದರಲ್ಲಿ ತಮ್ಮ ದರ್ಪ ಪ್ರದರ್ಶಿಸುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ” ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿ ದೈಹಿಕ ಹಲ್ಲೆಗೂ ಮುಂದಾಗುತ್ತಿದ್ದಾರೆ ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಚಿತ್ರದುರ್ಗದ ಘಟನೆಯ ಹಿಂದೆ , ರಾಜಕಾರಣಿಗಳ ಪ್ರಚೋದನೆ

ಚಿತ್ರದುರ್ಗದ ಘಟನೆಯ ಹಿಂದೆ ರಾಜಕಾರಣದ ಪ್ರಚೋದನೆ ಇರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು, ಅಧಿಕಾರಸ್ತ ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿರುವ ಪೊಲೀಸರು ಇಲಾಖೆಯ ಗೌರವ ಕಳೆಯುತ್ತಿದ್ದಾರೆ. ಚಿತ್ರದುರ್ಗದ ಪಿಎಸ್ಐ ಗಾದಿಲಿಂಗಪ್ಪ ಅವರನ್ನು ಈ ಕೂಡಲೇ ಪೊಲೀಸ್ ಮಹಾನಿರ್ದೇಶಕರು ಅಮಾನತ್ತಿನಲ್ಲಿಡದಿದ್ದರೆ ಬಿಜೆಪಿಯು ನಾಗರಿಕರೊಡಗೂಡಿ ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ಎಚ್ಚರಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.


WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";